ಕಾಂಗ್ರೆಸ್‌ಗೆ ಮತ ಹಾಕಿದರೆ ಡಬಲ್‌ ಕಷ್ಟ, ಉತ್ತಮ ಜೀವನಕ್ಕಾಗಿ ಪ್ರಧಾನಿ ಮೋದಿಗೆ ಮತ ನೀಡಿ: ಡಾ.ಕೆ.ಸುಧಾಕರ್‌

ಕಾಂಗ್ರೆಸ್‌ಗೆ ಮತ ಹಾಕಿದರೆ ಡಬಲ್‌ ಕಷ್ಟ, ಉತ್ತಮ ಜೀವನಕ್ಕಾಗಿ ಪ್ರಧಾನಿ ಮೋದಿಗೆ ಮತ ನೀಡಿ: ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮನವಿ

ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಗ್ಯಾರಂಟಿ

ಚಿಕ್ಕಬಳ್ಳಾಪುರ, ಏಪ್ರಿಲ್‌ 12, ಶುಕ್ರವಾರ

ಕಾಂಗ್ರೆಸ್‌ಗೆ ಮತ ನೀಡಿದ್ದಕ್ಕೆ ಕಳೆದ 10 ತಿಂಗಳಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಜನರು ಕಾಂಗ್ರೆಸ್‌ಗೆ ಮತ ಹಾಕಿದರೆ ಡಬಲ್‌ ಕಷ್ಟ ಅನುಭವಿಸಬೇಕಾಗುತ್ತದೆ. ಉತ್ತಮ ಜೀವನಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ ನೀಡಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮನವಿ ಮಾಡಿದರು.

ಹಳೇಹಳ್ಳಿ, ಶ್ಯಾಂಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

ದೇಶ ರಕ್ಷಣೆಯನ್ನು ಮಾಡಲು ನರೇಂದ್ರ ಮೋದಿಯವರಿಗೆ ಮಾತ್ರ ಸಾಧ್ಯ. ಕಾಶ್ಮೀರದಲ್ಲಿ ಮೊದಲು ಕಲ್ಲು ಬಿಸಾಡುವಂತೆ ಬಾಂಬ್‌ ಬಿಸಾಡುತ್ತಿದ್ದರು. ಆದರೆ ಕಳೆದ ಹತ್ತು ವರ್ಷಗಳಲ್ಲಿ ಬಾಂಬ್‌ನ ಶಬ್ದ ಕೂಡ ಕೇಳಿಲ್ಲ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಬೆಂಗಳೂರಿನಲ್ಲಿ ಬಾಂಬ್‌ ಸಿಡಿದಿದೆ. ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯರು ಆಯ್ಕೆಯಾದಾಗ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್‌ ಎಂದು ಕೂಗಿದ್ದಾರೆ. ಹೀಗಾದರೆ ಮುಂದೆ ಏನಾಗುತ್ತದೆ ಎಂದು ಜನರು ಚಿಂತಿಸಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ಬಡವರ ಪರವಾಗಿ ಚಿಂತಿಸುತ್ತಾರೆ. ಮಹಿಳೆಯರ ಆರೋಗ್ಯ ಹಾಳಾಗುವುದನ್ನು ನೋಡಿ 10 ಕೋಟಿ ಅಡುಗೆ ಅನಿಲ ಸಂಪರ್ಕ ನೀಡಿದ್ದಾರೆ. ಮಹಿಳೆಯರು ದೂರದ ಕೆರೆ, ಬಾವಿಯಿಂದ ನೀರು ತರಬಾರದೆಂದು ಜಲಜೀವನ್‌ ಮಿಷನ್‌ನಡಿ ಕೊಳಾಯಿ ನೀರು ನೀಡಿದ್ದಾರೆ. ಕಿಸಾನ್‌ ಸಮ್ಮಾನ್‌ನಡಿ ರೈತರಿಗೆ ಹಣ ನೀಡಿದ್ದಾರೆ. ಆದರೆ ಅದನ್ನು ರಾಜ್ಯ ಸರ್ಕಾರ ಕಿತ್ತುಕೊಂಡಿದೆ. ಒಂದು ಕಡೆ ತಗೊಂಡು ಮತ್ತೊಂದು ಕಡೆ ಮರಳಿ ಪಡೆಯುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎನಿಸಿಕೊಂಡಿದೆ ಎಂದು ದೂರಿದರು.

ಕಾಂಗ್ರೆಸ್‌ ನಾಯಕರು ವಿದ್ಯುತ್‌ ಉಚಿತವೆಂದು ಹೇಳಿ ಈಗ ದರ ಹೆಚ್ಚಳ ಮಾಡಿದ್ದಾರೆ. ಇದರಿಂದಾಗಿ ಪ್ರತಿ ಕುಟುಂಬಗಳ ಖರ್ಚು ಅಧಿಕವಾಗಿದೆ. 10 ಕೆಜಿ ಅಕ್ಕಿ ಕೊಡುತ್ತೇವೆಂದು ಹೇಳಿ ಏನೂ ಕೊಟ್ಟಿಲ್ಲ. ಈಗಲೂ 5 ಕೆಜಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಪ್ರಧಾನಿ ಮೋದಿ ಅಕ್ಕಿ ಕೊಡುವ ಬಗ್ಗೆ ಹೇಳಿಕೊಳ್ಳದಿದ್ದರೂ, ಕಾಂಗ್ರೆಸ್‌ ನಾಯಕರು ಮಾತ್ರ ಅನ್ನಭಾಗ್ಯವನ್ನು ತಾವೇ ಕೊಟ್ಟಿದ್ದು ಎಂದು ಎಲ್ಲ ಕಡೆ ಹೇಳುತ್ತಿದ್ದಾರೆ. ಬಿಜೆಪಿ ಎಂದಿಗೂ ಸುಳ್ಳು ಗ್ಯಾರಂಟಿ ನೀಡುವುದಿಲ್ಲ. ಅದರ ಬದಲು ಬದುಕು ಕಟ್ಟಿಕೊಡುವ ಯೋಜನೆಗಳನ್ನು ನೀಡುತ್ತದೆ ಎಂದರು.

Related posts

ಕಿರುತೆರೆಯಲ್ಲಿ ಶುರುವಾಗ್ತಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ “ಸುವರ್ಣ ಸೆಲೆಬ್ರಿಟಿ ಲೀಗ್” ಇದೇ ಭಾನುವಾರದಿಂದ ರಾತ್ರಿ 7 ಗಂಟೆಗೆ

ಯುವ ನಿರ್ಮಾಪಕಿಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್

ಎಲ್ಲರ ಮೆಚ್ಚುಗೆಗೆ ಪಾತ್ರವಾದ ಅಂಬಾನಿ ಕುಟುಂಬದ ಮದುವೆಯ ಧಾನ ಧರ್ಮ.

This website uses cookies to improve your experience. We'll assume you're ok with this, but you can opt-out if you wish. Read More