ಲೋಕಸಭೆ ಚುನಾವಣೆ : ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ, ಮೂರನೇ ಅವಧಿಗೆ ದಾಖಲೆಯ ಅಂತರದಿಂದ ಗೆಲುವಿನ ಉತ್ಸಾಹ ಮತ್ತು ನಿರೀಕ್ಷೆಯಲ್ಲಿದ್ದಾರೆ.

ಪ್ರಧಾನಿ ಮೋದಿಯವರು ಪ್ರತಿನಿಧಿಸುತ್ತಿರುವ ವಾರಣಾಸಿ ಕ್ಷೇತ್ರದಲ್ಲಿ ಜೂನ್ 1 ರಂದು ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ಪವಿತ್ರ ಗಂಗಾನದಿಯ ದಶಾಶ್ವಮೇಧ ಘಾಟ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ನಮೋ ಘಾಟ್‌ಗೆ ಕ್ರೂಸ್ ಹತ್ತುವ ಮುನ್ನ ಸ್ನಾನ ಮಾಡಿದರು. ಇಂದು ಗಂಗಾ ಸಪ್ತಮಿಯ ಶುಭ ದಿನವಾಗಿದ್ದು, ಘಾಟ್‌ನಲ್ಲಿ ಗಂಗಾ ಆರತಿ ಮಾಡಿದರು. ಕಾಲ ಭೈರವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ CM ಸಿದ್ದರಾಮಮಯ್ಯ ಹಾಗೂ DCM ಡಿ ಕೆ ಶಿವಕುಮಾರ್ ಭೇಟಿ ; ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ

ಪಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ; ಪ್ರಧಾನಿಗೆ ಪತ್ರ

ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ; 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು : ಸಿಟಿ ಸಿವಿಲ್ ಕೋರ್ಟು ಆದೇಶ

This website uses cookies to improve your experience. We'll assume you're ok with this, but you can opt-out if you wish. Read More