ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ; 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು : ಸಿಟಿ ಸಿವಿಲ್ ಕೋರ್ಟು ಆದೇಶ

ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ನಡೆಸುತ್ತಿದ್ದ, ಮಹೇಶ್ ಶೆಟ್ಟಿ ತಿಮರೋಡಿ ಬಳಗಗ್ಗೆ ಮತ್ತೊಂದು ಬಿಗ್ ಶಾಕ್ ಇದೀಗ ಸಿಕ್ಕಿದಂತಾಗಿದೆ. ಯಾವುದೇ ಸಾಕ್ಷಾಧಾರಗಳು ಇಲ್ಲದೆ ಸುಳ್ಳು ಆರೋಪ ಮಾಡುತ್ತಿರುವುದು ಮತ್ತೊಮ್ಮೆ ಸಾಬೀತಾಗಿದೆ.


ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಅವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಸೋಮನಾಥ ನಾಯಕ್, ತಮ್ಮಣ್ಣ ಶೆಟ್ಟಿ, ಜಯಂತ್ ಟಿ, ಪ್ರಸನ್ನರವಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದು, ಅದು 09.೦೫.2024 ರಂದು ವಿಚಾರಣೆಗೆ ಬಂದಿದ್ದು, ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರು ಅವರ ವಾದವನ್ನು ಆಲಿಸಿದ ಘನ ನ್ಯಾಯಾಲಯವು, ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಅವರ ವಿರುದ್ಧ ಮಾಧ್ಯಮಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಅಪಮಾನಕಾರಿ ಹೇಳಿಕೆ ನೀಡದಂತೆ ಹಾಗೂ ನಿಂದನಾತ್ಮಕವಾಗಿ ಪೋಸ್ಟ್ ಮಾಡುವುದನ್ನು ಪ್ರತಿಬಂಧಿಸಿದೆ. ಜೊತೆಗೆ ಈಗಾಗಲೇ ಪೋಸ್ಟ್ ಆಗಿರುವ ವಿಡಿಯೋಗಳನ್ನು ತಕ್ಷಣ ಡಿಲೀಟ್ ಮಾಡಲು ಆದೇಶಿಸಿದೆ.
ನ್ಯಾಯಾಂಗದ ವಿರುದ್ಧ ಸಾಕ್ಷಾಧಾರಗಳಿಲ್ಲದೆ ಹೋಗುವವರಿಗೆ ಇದು ತಕ್ಕಪಾಠವಾಗಿದೆ. ಸುಳ್ಳು ಹೇಳಿಕೆಗಳನ್ನು ನೀಡಿ ಜನರ ಭಾವನೆಗಳಿಗೆ ಧಕ್ಕೆ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಬಳಗಗ್ಗೆ ಶಿಕ್ಷೆ ಕಟ್ಟಿಟ್ಟ ಬುತ್ತಿಯಾಗಿದೆ.

Related posts

ಕಿರುತೆರೆಯಲ್ಲಿ ಶುರುವಾಗ್ತಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ “ಸುವರ್ಣ ಸೆಲೆಬ್ರಿಟಿ ಲೀಗ್” ಇದೇ ಭಾನುವಾರದಿಂದ ರಾತ್ರಿ 7 ಗಂಟೆಗೆ

ಯುವ ನಿರ್ಮಾಪಕಿಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್

ಎಲ್ಲರ ಮೆಚ್ಚುಗೆಗೆ ಪಾತ್ರವಾದ ಅಂಬಾನಿ ಕುಟುಂಬದ ಮದುವೆಯ ಧಾನ ಧರ್ಮ.

This website uses cookies to improve your experience. We'll assume you're ok with this, but you can opt-out if you wish. Read More