ಸ್ವಿಟ್ಜರ್ ಲ್ಯಾಂಡ್ ನಲ್ಲಿ ಸಂಜು ವೆಡ್ಸ್ ಗೀತಾ.ರಚಿತಾ ರಾಮ್ ಶ್ರೀನಗರ ಕಿಟ್ಟಿ ರೊಮ್ಯಾನ್ಸ್.

ಸ್ವಿಟ್ಜರ್ ಲ್ಯಾಂಡ್ ನಲ್ಲಿ ಸಂಜು ವೆಡ್ಸ್ ಗೀತಾ-2

ನಾಲ್ಕು ತಿಂಗಳ‌ ಹಿಂದೆ ಪ್ರಾರಂಭವಾಗಿದ್ದ ನಾಗಶೇಖರ್ ಅವರ ನಿರ್ದೇಶನದ ಸಂಜು ವೆಡ್ಸ್ ಗೀತಾ ೨’ ಚಿತ್ರದ ಚಿತ್ರೀಕರಣ ಪ್ರಮುಖ ಘಟ್ಟಕ್ಕೆ ಬಂದಿದೆ. ಇದೇ ತಿಂಗಳು ಚಿತ್ರತಂಡ ಸ್ವಿಟ್ಜರ್ ಲ್ಯಾಂಡ್ ಗೆ ಹೋಗಿ 2 ಹಾಡುಗಳನ್ನು ಚಿತ್ರೀಕರಿಸಿಕೊಂಡು ಬಂದಿದೆ. ಈವರೆಗೆ ನಡೆಸಿದ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಳ್ಳಲೆಂದು ನಿರ್ದೇಶಕ‌ ನಾಗಶೇಖರ್ ಹಾಗೂ ತಂಡ ಮಾದ್ಯಮಗಳ ಮುಂದೆ ಬಂದಿತ್ತು. ಅಶೋಕ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ವಿಟ್ಜರ್ ಲ್ಯಾಂಡ್ ಶೂಟಿಂಗ್ ದೃಶ್ಯಗಳ ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ನಾಗಶೇಖರ್ ಹಿಂದೆ ಸಂಜು ವೆಡ್ಸ್ ಗೀತಾ ಸಿನಿಮಾ ಮಾಡುವಾಗ ಆದ ಅನುಭವಗಳನ್ನು ಮೆಲುಕು ಹಾಕಿದರು. ಅಲ್ಲದೆ ಈ ಚಿತ್ರ ಅದಕ್ಕಿಂತ ಚೆನ್ನಾಗಿ, ವೈಭವಯುತವಾಗಿ ಮೂಡಿಬರುತ್ತಿದೆ. ಇತ್ತೀಚೆಗಷ್ಟೇ ಸ್ವಿಟ್ಜರ್ ಲ್ಯಾಂಡ್ ನಲ್ಲಿ ಹಾಡುಗಳ ಶೂಟಿಂಗ್ ಮಾಡಿಕೊಂಡು ಬಂದಿದ್ದೇವೆ. ನಂತರ ಮುಂಬಯಿ, ಹೈದರಾಬಾದ್ ಶೂಟಿಂಗ್ ಮಾಡಿ, 2024ರ ಏಪ್ರಿಲ್ 1ರಂದು ಚಿತ್ರವನ್ನು ರಿಲೀಸ್ ಮಾಡುವ ಯೋಜನೆಯಿದೆ.
ಸಂಜು ವೆಡ್ಸ್ ಗೀತಾ ಚಿತ್ರಕ್ಕೆ ಸಿಕ್ಕ ಯಶಸ್ಸಿನಿಂದಲೇ ಭಾಗ ಎರಡು ಇಷ್ಟು ಅದ್ದೂರಿಯಾಗಿ ಮೂಡಿಬರುತ್ತಿದೆ. ರಂಗಾಯಣ ರಘು, ಸಾಧು ಕೋಕಿಲ ವಿಶೇಷ ಪಾತ್ರಗಳಲ್ಲಿದ್ದಾರೆ. ನನ್ನ‌ ಈ ಕನಸಿಗೆ ಎಂಜಿನಿಯರಿಂಗ್ ಕ್ಲಾಸ್ ಮೆಟ್ ಕುಮಾರ್ ಕೈಜೋಡಿಸಿದ್ದಾರೆ. ಶ್ರೀಧರ್ ವಿ. ಸಂಭ್ರಮ್ ಅದ್ಭುತವಾದ ಟ್ಯೂನ್ ಗಳನ್ನು ಮಾಡಿ ಕೊಟ್ಟಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ರಚಿತಾ ರಾಮ್, ಶ್ರೀನಗರ ಕಿಟ್ಟಿ ಇಬ್ಬರೂ ಅದ್ಭುತ ಅಭಿನಯ ನೀಡಿದ್ದಾರೆ. 2024ರ ಬ್ಲಾಕ್ ಬಸ್ಟರ್ ಚಿತ್ರವಾಗಿ ಸಂಜು ವೆಡ್ಸ್ ಗೀತಾ ಮೂಡಿಬರಲಿದೆ. ಇಂಥ ಒಳ್ಳೆ ನಿರ್ಮಾಪಕರು ನಮ್ಮ ಚಿತ್ರಕ್ಕೆ ಸಿಕ್ಕಿದ್ದಾರೆ. ಯಾವುದಕ್ಕೂ ಹಿಂದೇಟು ಹಾಕಲ್ಲ ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹಿರಿಯ ನಿರ್ದೇಶಕ ಎಸ್.ಮಹೇಂದರ್, ನಟ ಶರಣ್ ಆಗಮಿಸಿ ನಾಗಶೇಖರ್ ಹಾಗೂ ಚಿತ್ರದ ಬಗ್ಗೆ ಮಾತನಾಡಿದರು. ನಾಯಕ ಶ್ರೀನಗರ ಕಿಟ್ಟಿ ಮಾತನಾಡಿ ಅಲ್ಲಿ ಕೊರೆಯುವ ಛಳಿ ಇತ್ತು. ಹಾಡುಗಳು ತುಂಬಾ ಚೆನ್ನಾಗಿ ಬಂದಿವೆ ಎಂದು ಹೇಳಿದರು.
ನಾಯಕಿ ರಚಿತಾ ರಾಮ್ ಮಾತನಾಡಿ ತುಂಬಾ ಶೇಡ್ಸ್ ಇರುವಂಥ ಗೀತಾ ಪಾತ್ರ ನನ್ನದು. ಸಿನಿಮಾ ಅಂದ್ರೆ ಖುಷಿ, ಕಷ್ಟ ಎರಡೂ ಇರುತ್ತೆ. ನಾವಿ ಹೋಗಿದ್ದೇ ಡಿಸೆಂಬರ್ ಛಳಿಯಲ್ಲಿ. ನಾಗಶೇಖರ್ ಏನಾ ಮಾಡಿದರೂ ಪ್ಲಾನ್ಡ್ ಆಗಿ ಮಾಡ್ತಾರೆ. ನಮಗೆ ನೇಚರ್ ಕೂಡ ತುಂಬಾ ಸಪೋರ್ಟ್ ಮಾಡಿತು. ಅಲ್ಲಿ ಮಾಡಿದ ಎರಡು ಹಾಡುಗಳೂ ತುಂಬಾ ಚೆನ್ನಾಗಿ ಬಂದಿವೆ. ಲೊಕೇಶನ್ ಅದ್ಭುತ. ಸತ್ಯ ಹೆಗಡೆ ಸರ್ ಬೇರೆ ಬೇರೆ ಆ್ಯಂಗಲ್ ನಲ್ಲಿ ಶೂಟ್ ಮಾಡಿದ್ದಾರೆ. ಎಮೋಷನಲ್ ಸೀನ್ಸ್ ಇನ್ಟೆನ್ಸ್ ಆಗಿ ಬಂದಿದೆ ಎಂದರು.
ಸಂಗೀತ ನಿರ್ದೇಶಕ‌ ಶ್ರೀಧರ ವಿ. ಸಂಭ್ರಮ ಚಿತ್ರದಲ್ಲಿ ೫ ಸುಂದರ ಹಾಡುಗಳಿಗೆ ಸಂಗೀತ ನೀಡಿದ್ದು, ಕವಿರಾಜ ಸಾಹಿತ್ಯ ಸಾಹಿತ್ಯ ಬರೆದಿದ್ದಾರೆ.
ನಿರ್ಮಪಕ ಚಲವಾದಿ ಕುಮಾರ್‌ ಮಾತನಾಡಿ, ನಾಗಶೇಖರ್ ನಾನು ಇಂಜಿನಿಯರಿಂಗ್ ಕ್ಲಾಸ್ ಮೆಟ್ಸ್. ಸ್ಕ್ರಿಪ್ಟ್ ನಲ್ಲೂ ನಾನು ಜೊತೆ ಕುಳಿತಿದ್ದೆ. ಸಿನಿಮಾ ತುಂಬಾ ಚೆನ್ನಾಗಿ ಬರುತ್ತಿದೆ ಎಂದರು. ನಾಗಶೇಖರ್ ಮೂವೀಸ್ ಹಾಗೂ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

Related posts

ಗಟ್ಟಿ ಚಿತ್ರಕತೆ ಜೊತೆಗೆ ಮೈ ಜುಮೆನ್ನಿಸುವ ಮಾಸ್. ಭೈರತಿ ರಣಗಲ್ ಶಿವ ತಾಂಡವ.. ಫಿಲಂ ರಿವ್ಯೂ.

ದೃವತಾರೆ ಚಿತ್ರದ ಟ್ರೈಲರ್ ಬಿಡುಗಡೆ, ಮೆಚ್ಚುಗೆ ವ್ಯಕ್ತಪಡಿಸಿದ ಸ್ಯಾಂಡಲ್ವುಡ್ ನಟರು.

ರಿಪ್ಪೆನ್ ಸ್ವಾಮಿ ಮೂಲಕ ಮಾಸ್ ಅವತಾರ ಎತ್ತಿದ ವಿಜಯ್ ರಾಘವೇಂದ್ರ

This website uses cookies to improve your experience. We'll assume you're ok with this, but you can opt-out if you wish. Read More