ಕಾಂಗ್ರೆಸ್ ಸರ್ಕಾರವು ಚುನಾವಣೆಗೆ ಮುನ್ನ ನೀಡಿದ್ದ ಭರವಸೆಗಳಲ್ಲಿ ಉಚಿತವಾಗಿ ಹೆಚ್ಚುವರಿ ಅಕ್ಕಿ ನೀಡುವ ಭರವಸೆ ಕೂಡಾ ಒಂದಾಗಿತ್ತು. ಆದರೆ ಅಕ್ಕಿಯ ಕೊರತೆಯ ಕಾರಣದಿಂದಾಗಿ ರಾಜ್ಯ ಸರ್ಕಾರವು ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ಕೊಡುವುದಾಗಿ ಕೆಲವೇ ದಿನಗಳ ಹಿಂದೆಯಷ್ಟೇ ಘೋಷಣೆ ಮಾಡಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾದ್ಯಮಗಳಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಇದೇ ವಿಚಾರವಾಗಿ ನಟ ಚೇತನ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿರುವುದು ಮಾತ್ರವೇ ಅಲ್ಲದೇ ಸಿದ್ದರಾಮಯ್ಯನವರ ಸರ್ಕಾರ ನುಡಿದಂತೆ ನಡೆಯಬೇಕು ಎಂದು ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ನಟ ಮತ್ತು ಸಾಮಾಜಿಕ ಹೋರಾಟಗಾರನಾಗಿ ಗುರುತಿಸಿಕೊಂಡಿರುವ ಚೇತನ್ ಅಹಿಂಸಾ ಅವರು, ಸರ್ಕಾರ ಅಕ್ಕಿಯ ಬದಲಿಗೆ ಹಣದ ಜೊತೆಗೆ ರಾಗಿ ಮತ್ತು ಜೋಳವನ್ನು ಕೊಡಬೇಕು. ಬಡವರಿಗೆ ಶಿಕ್ಷಣವನ್ನು ನೀಡಬೇಕು. ಭೂ ಸುಧಾರಣೆ ಮಾಡಿ ರಾಷ್ಟ್ರೀಕರಣ ಮಾಡಬೇಕು. ಅಕ್ಕಿಯ ವಿಚಾರದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಬೇರೆ ರಾಜ್ಯಕ್ಕೆ ಮೊರೆ ಹೋಗುತ್ತಿದ್ದು ಅದರ ಬದಲಾಗಿ ನಮ್ಮ ರೈತರನ್ನು ಬೆಳೆಸುವ ಕೆಲಸ ಆಗಬೇಕಾಗಿದೆ ಎನ್ನುವ ಮಾತನ್ನು ಹೇಳಿದ್ದಾರೆ.
ಇದೇ ವೇಳೆಯಲ್ಲಿ ಚೇತನ ಅವರು ಕೆ ಜೆ ಜಾರ್ಜ್ ಬಡವರಿಗೆ ದುಡ್ಡು ಬೇಡ ಅಂತಾರೆ. ಸರ್ಕಾರ ದುಡ್ಡು, ರಾಗಿ, ಜೋಳ ಎಲ್ಲವನ್ನು ಕೊಡಬೇಕು. ಸಚಿವ ಕೆ ಜೆ ಜಾರ್ಜ್ ಅವರು ಒಬ್ಬ ಶ್ರೀಮಂತ ವ್ಯಕ್ತಿ ಅವರು ಈ ರೀತಿ ಮಾತನಾಡುವುದು ಅವರಿಗೆ ಶೋಭೆಯನ್ನು ತರುವುದಿಲ್ಲ ಎನ್ನುವ ಮಾತುಗಳನ್ನು ಸಹಾ ಹೇಳಿದ್ದಾರೆ. ನಟ ಚೇತನ್ ಅವರು ಹೇಳಿದ ಮಾತುಗಳು ಇದೀಗ ಸುದ್ದಿಯಾಗಿ ವೈರಲ್ ಆಗಿದ್ದು, ಚೇತನ ಅವರ ಮಾತುಗಳಿಗೆ ಅನೇಕರು ಕಾಮೆಂಟ್ ಗಳನ್ನು ಮಾಡಿ ಪರ ವಿರೋಧ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.