ಬೇಟಿ ಬಚಾವೋ ನಾಟಕಕ್ಕೆ ದಿಕ್ಕಾರವಿರಲಿ: ಮಣಿಪುರ ಘಟನೆಗೆ ಸಿಡಿದೆದ್ದ ನಟ ಕಿಶೋರ್

ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರರನ್ನಾಗಿ ಮಾಡಿದ ಗುಂಪೊಂದು ನಡೆಸಿದ ಅಮಾನವೀಯ ಕೃತ್ಯದ ವೀಡಿಯೋ ವೈರಲ್ ಆದ ಮೇಲೆ ಇಡೀ ದೇಶದಲ್ಲಿ ಜನರು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಇಂತಹ ಕ್ರೌರ್ಯ ಮೆರೆದವರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರು ಮತ್ತು ಸೆಲೆಬ್ರಿಟಿಗಳು ಈ ಸಮಾಜ ತಲೆ ತಗ್ಗಿಸುವಂತಹ ಘಟನೆ ಬಗ್ಗೆ ತಮ್ಮ ಅಸಮಾಧಾನ ಮತ್ತು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಬಹುಭಾಷಾ ನಟ, ಕನ್ನಡದವರಾದ ನಟ ಕಿಶೋರ್ ಸಹಾ ಈ ವಿಚಾರವಾಗಿ ಅಸಮಾಧಾನಗೊಂಡಿದ್ದು, ತಮ್ಮ ಕಟು ಶಬ್ಧಗಳ ಮೂಲಕ ಮೋದಿ ಮತ್ತು ಆಡಳಿತ ಪಕ್ಷದ ಮೇಲೆ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ನಟ ಕಿಶೋರ್ ಅವರು, ಕೇವಲ ಮತ ಮತ್ತು ಅಧಿಕಾರಕ್ಕಾಗಿ ಜನರನ್ನು ವಿಭಜಿಸುವ ನಿಮ್ಮ ರಾಜಕೀಯ, ಇಂದು ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ …

ನೀವು ಈಗಲಾದರೂ ನಿಮ್ಮ ಬಾಯಿ ತೆರೆದು ಈ ಮಹಿಳೆಯರಲ್ಲಿ ಕ್ಷಮೆಯಾಚಿಸದಿದ್ದರೆ. ನಿಮ್ಮ 56 ಇಂಚಿನ ಬಡಾಯಿಗೆ ಧಿಕ್ಕಾರವಿರಲಿ.. ಹೌದು, ನಿಮ್ಮಿಂದ ನಾವು ಏನನ್ನಾದರೂ ನಿರೀಕ್ಷಿಸಲು ಹೇಗೆ ಸಾಧ್ಯ? ಮಹಿಳಾ ಕುಸ್ತಿಪಟುಗಳ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬೆಂಬಲಿಸಿದವರು ನೀವೇ ಅಲ್ಲವೇ? ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬಿಡುಗಡೆ ಮಾಡಿ ಸಂಭ್ರಮಿಸಿದವರು ನೀವೇ ಅಲ್ಲವೇ?

ಹಾತ್ರಸ್ ನ ದಲಿತ ಹೆಣ್ಣುಮಕ್ಕಳ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಮುಚ್ಚಿ ಮುಗಿಸಿದವರು ನೀವೇ ಅಲ್ಲವೇ???? ನಿಮ್ಮ ಘೋಷಣೆಗಳನ್ನು ನಿಲ್ಲಿಸಿ ಮೊದಲು ಕೆಲಸ ಮಾಡಿ.. ನಿಮ್ಮ ಬೇಟಿ ಬಚಾವೋ ನಾಟಕಕ್ಕೆ ಧಿಕ್ಕಾರವಿರಲಿ…. ಎಂದು ಬರೆದುಕೊಂಡಿದ್ದಾರೆ. ನಟನ ಪೋಸ್ಟ್ ಗೆ ಅನೇಕರು ಪ್ರತಿಕ್ರಿಯೆಗಳನ್ನು ನೀಡುತ್ತಾ ಅವರ ಮಾತಿಗೆ ತಮ್ಮ ಬೆಂಬಲವನ್ನು ನೀಡಿದ್ದಾರೆ. ಅವರ ಪೋಸ್ಟ್ ಗೆ ಮೆಚ್ಚುಗೆಗಳನ್ನು ಸಹಾ ವ್ಯಕ್ತಪಡಿಸಿದ್ದಾರೆ.

Related posts

ಭಾರತದ 2 ನೇ ಅತಿದೊಡ್ಡ ಸಂಯೋಜಿತ ಉಕ್ಕು ಸ್ಥಾವರವಾಗಿದ್ದು, ಇದು 3,800 ಕ್ಕೂ ಹೆಚ್ಚು ನೇರ ಉದ್ಯೋಗ ನೀಡುವ ಕಾರ್ಖಾನೆ ಕರ್ನಾಟಕದ ಕೊಪ್ಪಳದಲ್ಲಿ ಸ್ಥಾಪನೆ.

ಫೆ.7ಕ್ಕೆ “ಗಜರಾಮ” ಅಖಾಡಕ್ಕೆ ಇಳಿಯಲು ರೆಡಿ.ರಾಜವರ್ಧನ್ ಕುಸ್ತಿಕಥೆಯಲ್ಲಿ ರಾಜವರ್ಧನ್.

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

This website uses cookies to improve your experience. We'll assume you're ok with this, but you can opt-out if you wish. Read More