ಮರೆಯಲಾಗದ ಅನುಭವ: ಅಮರನಾಥ ಯಾತ್ರೆಯ ಖುಷಿ ಹಂಚಿಕೊಂಡ ಸಾಯಿ ಪಲ್ಲವಿ

ದಕ್ಷಿಣ ಸಿನಿಮಾ ರಂಗದ ಜನಪ್ರಿಯ ನಟಿ, ಲೇಡಿ ಪವರ್ ಸ್ಟಾರ್ ಖ್ಯಾತಿಯ ನಟಿ ಸಾಯಿ ಪಲ್ಲವಿ ದೈವಭಕ್ತೆ ಎನ್ನುವುದು ತಿಳಿದಿರುವ ವಿಚಾರವಾಗಿದೆ. ಇತ್ತೀಚಿಗೆ ನಟಿ ಯಾವುದೇ ಹೊಸ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಅಭಿಮಾನಿಗಳು ನಟಿಯ ಹೊಸ ಸಿನಿಮಾ ಯಾವಾಗ ಎನ್ನುವ ನಿರೀಕ್ಷೆಯಲ್ಲಿ ಇದ್ದಾರೆ. ಈಗ ಸಾಯಿ ಪಲ್ಲವಿ ಅವರು ತಮ್ಮ ಬಿಡುವಿನ ಸಮಯದಲ್ಲಿ ಅವರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದು, ಇದೀಗ ತಂದೆ-ತಾಯಿ ಜೊತೆ ಅಮರನಾಥ ಯಾತ್ರೆ ಮಾಡಿದ್ದಾರೆ.

ಸಾಯಿ ಪಲ್ಲವಿ ತಮ್ಮ 60 ರ ಆಸುಪಾಸಿನ ಪಾಲಕರೊಂದಿಗೆ ಅಮರನಾಥ ಯಾತ್ರೆಯನ್ನು ಮುಗಿಸಿದ್ದ, ಆ ಫೋಟೋ ಮತ್ತು ವೀಡಿಯೋಗಳನ್ನು ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಟಿಯು ತಮ್ಮ ಈ ಸುಂದರ ಅನುಭವದ ಕುರಿತಾಗಿ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ನೀಡಿದ್ದಾರೆ.

ಅಮ್ಮ ಅಪ್ಪನೊಂದಿಗೆ ಅಮರನಾಥ ಯಾತ್ರೆ ಮಾಡಿದ್ದು ನಾನು ಎಂದಿಗೂ ಮರೆಯಲಾಗದ ಅನುಭವ ಎಂದಿದ್ದಾರೆ ಸಾಯಿಪಲ್ಲವಿ. ಆ ಅನುಭವವನ್ನು ಪದಗಳಲ್ಲಿ ವರ್ಣಿಸುವುದಕ್ಕೆ ಸಾಧ್ಯವಿಲ್ಲ. ಈ ಯಾತ್ರೆ ಸಾಧ್ಯವಾಗಿದ್ದು ತಂದೆ ತಾಯಿಗಳ ಆಶೀರ್ವಾದದಿಂದ ಎಂದು ನಟಿಯು ಬಹಳ ಖುಷಿಯಿಂದ ಹೇಳಿದ್ದಾರೆ. ನಟಿ ಶೇರ್ ಮಾಡಿದ ಫೋಟೋಗಳಿಗೆ ಅವರ ಅಭಿಮಾನಿಗಳು ಕಾಮೆಂಟ್ ಗಳನ್ನು ಮಾಡುವ ಮೂಲಕ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ‌

Related posts

ಗಟ್ಟಿ ಚಿತ್ರಕತೆ ಜೊತೆಗೆ ಮೈ ಜುಮೆನ್ನಿಸುವ ಮಾಸ್. ಭೈರತಿ ರಣಗಲ್ ಶಿವ ತಾಂಡವ.. ಫಿಲಂ ರಿವ್ಯೂ.

ದೃವತಾರೆ ಚಿತ್ರದ ಟ್ರೈಲರ್ ಬಿಡುಗಡೆ, ಮೆಚ್ಚುಗೆ ವ್ಯಕ್ತಪಡಿಸಿದ ಸ್ಯಾಂಡಲ್ವುಡ್ ನಟರು.

ರಿಪ್ಪೆನ್ ಸ್ವಾಮಿ ಮೂಲಕ ಮಾಸ್ ಅವತಾರ ಎತ್ತಿದ ವಿಜಯ್ ರಾಘವೇಂದ್ರ

This website uses cookies to improve your experience. We'll assume you're ok with this, but you can opt-out if you wish. Read More