ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಮೇರಿಕಾ ಪ್ರವಾಸದ ವಿಚಾರವಾಗಿ ಈಗಾಗಲೇ ಸಾಕಷ್ಟು ಸುದ್ದಿಗಳಾಗಿದೆ. ಇನ್ನು ಪ್ರಧಾನಿಯವರ ಅಧಿಕೃತ ಅಮೆರಿಕಾ ಭೇಟಿಯ ಸಮಾರೋಪ ಸಮಾರಂಭದ ವಿಚಾರವು ಈಗ ಎಲ್ಲರ ಗಮನವನ್ನು ಸೆಳೆದಿದೆ. ಸಮಾರೋಪ ಸಮಾರಂಭದಲ್ಲಿ ನಡೆದ ದೃಶ್ಯದ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದ್ದು ಅಪಾರವಾದ ಮೆಚ್ಚುಗೆಗಳು ಹರಿದು ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದೆ.
ಸಮಾರೋಪ ಸಮಾರಂಭದಲ್ಲಿ ಭಾರತದ ರಾಷ್ಟ್ರಗೀತೆ ಜನಗಣ ಮನವನ್ನು ಹಾಡಲಾಯಿತು. ನಂತರ ಭಾರತದ ರಾಷ್ಟ್ರ ಗೀತೆಯನ್ನು ಹಾಡಿದ ಅಮೇರಿಕನ್ ಗಾಯಕಿ ಮೇರಿ ಮಿಲ್ಬೆನ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆಯುವ ಮೂಲಕ ವಿಶ್ವದ ಗಮನವನ್ನು ಸೆಳೆದಿದ್ದಾರೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
38 ವರ್ಷ ವಯಸ್ಸಿನ ಮಿಲ್ಬೆನ್ ಅವರು ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೀಗನ್ ಬಿಲ್ಡಿಂಗ್ ಮತ್ತು ಇಂಟರ್ನ್ಯಾಷನಲ್ ಟ್ರೇಡ್ ಸೆಂಟರ್‌ನಲ್ಲಿ, ಯುನೈಟೆಡ್ ಸ್ಟೇಟ್ಸ್ ಇಂಡಿಯನ್ ಕಮ್ಯುನಿಟಿ ಫೌಂಡೇಶನ್ (USICF) ಆಯೋಜನೆ ಮಾಡಿದ್ದು ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಗೀತೆಯನ್ನು ಹಾಡಿದರು. ಕಾರ್ಯಕ್ರಮಕ್ಕೆ ಮೊದಲು ಮಿಲ್ಬೆನ್ ಭಾರತದ ರಾಷ್ಟ್ರ ಗೀತೆ ಹಾಡುವುದು ಒಂದು ಗೌರವ ಎನ್ನುವ ಮಾತನ್ನು ಹೇಳಿದ್ದರು.