ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ್ದ ಉಚಿತ ಭಾಗ್ಯ ಗಳಲ್ಲಿ ಸರ್ಕಾರವು ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಕ್ಕೆ ಹತ್ತು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ಘೋಷಣೆಯನ್ನು ಮಾಡಿತ್ತು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಾವು ಭರವಸೆ ನೀಡಿದ್ದ ಹೆಚ್ಚುವರಿ ಅಕ್ಕಿಯನ್ನು ನೀಡಲು ಸಾಧ್ಯವಾಗದ ಕಾರಣದಿಂದಾಗಿ ಈಗ ಸರ್ಕಾರವು ಅದಕ್ಕೊಂದು ಪರ್ಯಾವಾದ ವಿಧಾನವನ್ನು ಕಂಡು ಕೊಂಡಿದೆ.
ಈ ವಿಚಾರ ಈಗ ದೊಡ್ಡ ಸುದ್ದಿಯಾಗಿದೆ.ಹೌದು, ಕಾಂಗ್ರೆಸ್ ಸರ್ಕಾರಕ್ಕೆ ಈಗ ಹೆಚ್ಚುವರಿ ಐದು ಕೆಜಿ ಅಕ್ಕಿಯನ್ನು ನೀಡಲು ಸಾಧ್ಯವಾಗದ ಕಾರಣ ಅದರ ಐದು ಕೆಜಿ ಅಕ್ಕಿಗೆ ಹಣವನ್ನು ನೀಡಲು ಮುಂದಾಗಿದೆ.ಈಗಾಗಲೇ ಅನ್ನಭಾಗ್ಯ ಯೋಜನೆಯಡಿಯಲ್ಲಿ 5.ಕೆ.ಜಿ ಅಕ್ಕಿಯನ್ನು ಸರ್ಕಾರವು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದೆ. ಈಗ ಉಳಿದ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ 170 ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಆಹಾರ ಸಚಿವ ಕೆ.ಎಚ್. ಮುನಿಯಪ್ಪನವರು ತಿಳಿಸಿದ್ದಾರೆ.
ಅಲ್ಲದೇ ಮುಂದಿನ ಜುಲೈ ತಿಂಗಳಿನಿಂದಲೇ ಬಿಪಿಎಲ್ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಈ ಹಣ ಜಮೆಯಾಗಲಿದೆ ಎನ್ನಲಾಗಿದೆ. ಅಕ್ಕಿಯ ದಾಸ್ತಾನು ಆಗುವವರೆಗೂ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಹೊಸ ನಿರ್ಧಾರಕ್ಕೆ ಸೋಶಿಯಲ್ ಮೀಡಿಯಾಗಳಲ್ಲಿ ಜನರು ಮಿಶ್ರ ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ. ತರಹೇವಾರಿ ಕಾಮೆಂಟ್ ಗಳ ಮೂಲಕ ಕೆಲವರು ಇದನ್ನು ಟೀಕಿಸಿದರೆ ಇನ್ನೂ ಕೆಲವರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.