ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ನೀಡಿರುವ ಗ್ಯಾರಂಟಿಗಳಲ್ಲಿ (Congress Guarantee). ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗಾಗಿ ಪ್ರತ್ಯೇಕ ಆ್ಯಪ್ ಗಾಗಿ ಸಚಿವ ಸಂಪುಟ ದಲ್ಲಿ ಹಸಿರು ನಿಶಾನೆ ದೊರೆತಿದೆ. ಈ ಮೂಲಕ ರಾಜ್ಯದ ಮಹಿಳೆಯರ ಖಾತೆಗೆ ಆಗಸ್ಟ್ ನಲ್ಲಿ 2000 ರೂಪಾಯಿಗಳ ಹಣ ಬರುವುದು ಖಚಿತವಾಗಿದೆ. ಇಂದು ಬುಧವಾರ ನಡೆದಿರುವ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಆಪ್ ಬಗ್ಗೆ ಚರ್ಚೆ ನಡೆದಿದೆ. ಸಭೆಯಲ್ಲಿ ಇದೇ ವೇಳೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕುರಿತಾಗಿ ಸರ್ಕಾರದ ನಿರ್ಧಾರವನ್ನು ಮಾಡಿದೆ.
ಸಚಿವೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಎಂ ಸಿದ್ಧರಾಮಯ್ಯನವರಿಗೆ ಆ್ಯಪ್ ನ ವಿವರಣೆಯನ್ನು ನೀಡಿದ್ದು , ಅನಂತರ ಅವರು ಪ್ರತ್ಯೇಕ ಆ್ಯಪ್ ಕುರಿತಾಗಿ ಸಂಪುಟ ಸಹೋದ್ಯೋಗಿಗಳಿಗೂ ಮಾಹಿತಿಯನ್ನು ನೀಡಿದ್ದಾರೆ. ನಂತರ ಹೊಸ ಆ್ಯಪ್ ಗೆ ಗ್ರೀನ್ ಸಿಗ್ನಲ್ ದೊರೆತಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರ ಹಣವನ್ನು ಪಡೆಯುವುದಕ್ಕೆ ಎಂದಿನಿಂದ ಅರ್ಜಿ ಸಲ್ಲಿಕೆ ಮಾಡಬೇಕೆನ್ನುವ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ.
ಪ್ರಸ್ತುತ ಈ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಕಲ ಸಿದ್ಧತೆಗಳನ್ನು ನಡೆಸಿದೆ. ಹೆಚ್ಚೆಚ್ಚು ಅರ್ಜಿ ಸಲ್ಲಿಕೆ ಆದರೂ ಸಹಾ ಸರ್ವರ್ ನ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸಿದ್ಧತೆಗಳನ್ನು ನಡೆಸಲಾಗುತ್ತದೆ. ಅಲ್ಲದೇ ಬಾಪೂಜಿ ಸೇವಾ ಕೇಂದ್ರದ ಮೂಲಕವು ಸಹಾ ಅರ್ಜಿ ಸಲ್ಲಿಕೆಯನ್ನು ಮಾಡುವ ಅವಕಾಶಗಳ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಷ್ಟೆ ಅಲ್ಲದೇ
ಬೆಂಗಳೂರು ಒನ್, ಗ್ರಾಮ ಒನ್, ಹಾಗೂ ಸೇವಾ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಬಹುದು.