ಪುನೀತ್ ರಾಜಕುಮಾರ್ ಸ್ಮರಣಾರ್ಥ ಮಹತ್ವದ ಯೋಜನೆಯನ್ನು ಘೋಷಿಸಿದ ಸಿಎಂ ಸಿದ್ಧರಾಮಯ್ಯನವರು

ಕನ್ನಡ ಸಿನಿಮಾ ರಂಗದ ಪವರ್ ಸ್ಟಾರ್ ಖ್ಯಾತಿಯ ಪುನೀತ್ ರಾಜಕುಮಾರ್ ಅವರು 2021ರ ಅಕ್ಟೋಬರ್ ನಲ್ಲಿ ಹೃದಯಘಾತದಿಂದ ನಿಧನರಾದರು. ಪುನೀತ್ ರಾಜಕುಮಾರ್ ಅವರ ಅಗಲಿಕೆ ಕನ್ನಡ ನಾಡಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟವಾಗಿದೆ. ಅವರನ್ನು ಅಭಿಮಾನಿಗಳು ಈಗಲೂ ಪ್ರತಿದಿನ ಸ್ಮರಿಸುತ್ತಲೇ ಇದ್ದಾರೆ. ಪುನೀತ್ ರಾಜಕುಮಾರ್ ಅವರ ನಿಧನಾನಂತರದ ದಿನಗಳಲ್ಲಿ ಹೃದಯಾಘಾತದ ಬಗ್ಗೆ ಜಾಗೃತಿಯನ್ನು ಮೂಡಿಸುವ ಕಾರ್ಯಗಳು ಅನೇಕರಿಂದ ನಡೆಯುತ್ತಿದೆ. ಈಗ ಇದೇ ನಿಟ್ಟಿನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಒಂದು ಹೆಜ್ಜೆಯನ್ನಿಡಲು ಮುಂದಾಗಿದೆ. ರಾಜ್ಯ ಸರ್ಕಾರ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥವಾಗಿ ಹೊಸ ಯೋಜನೆಯೊಂದನ್ನು ಜಾರಿಗೆ ತರುತ್ತಿದೆ.

ಹೃದಯಘಾತವನ್ನು ತಡೆಗಟ್ಟಲು ಸ್ವಯಂ ಚಾಲಿತ ಎಲೆಕ್ಟ್ರಾನಿಕ್ ಡಿಫಿಬ್ರಿಲೇಟರ್ ಯಂತ್ರಗಳು ಬಹಳ ಉಪಯೋಗಕಾರಿಯಾಗಿದ್ದು, ಹೃದಯಾಘಾತ ಆಗುವ ಸಾಧ್ಯತೆಗಳಿದ್ದರೆ ಈ ಯಂತ್ರವು ಅದನ್ನು ಮೊದಲೇ ಗುರುತಿಸುತ್ತದೆ. ಈಗ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು AED ಮಿಷನ್ಗಳನ್ನು ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲು ಸರ್ಕಾರ ಮುಂದಾಗಿದೆ.

ಇದಕ್ಕಾಗಿ ಆರು ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗುವುದು ಎಂದು ಸಿಎಂ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಪುನೀತ್ ರಾಜಕುಮಾರ್ ಅವರು ನಿಧನ ಹೊಂದಿದ ನಂತರದ ದಿನಗಳಲ್ಲಿ ಅವರ ಹೆಸರನ್ನು ಸ್ಮರಣಾರ್ಥವನ್ನಾಗಿ ಮಾಡಲು ಈಗಾಗಲೇ ಸಾಕಷ್ಟು ಕೆಲಸಗಳು ನಡೆದಿದೆ. ರಾಜ್ಯದಲ್ಲಿ ಹಲವು ರಸ್ತೆಗಳು ಮತ್ತು ಪಾರ್ಕ್ ಗಳಿಗೆ ಅವರ ಹೆಸರನ್ನು ಇಡಲಾಗಿದೆ. ಈಗ ಸಿದ್ದರಾಮಯ್ಯನವರ ಸರ್ಕಾರ ಪುನೀತ್ ರಾಜಕುಮಾರ್ ಅವರ ಹೆಸರನ್ನು ಶಾಶ್ವತವಾಗಿಸಲು ಮಾಡುತ್ತಿರುವ ಪ್ರಯತ್ನಗಳಲ್ಲಿ ಈ ಹೊಸ ಯೋಜನೆಯೂ ಒಂದಾಗಿದೆ.

Related posts

ಭಾರತದ 2 ನೇ ಅತಿದೊಡ್ಡ ಸಂಯೋಜಿತ ಉಕ್ಕು ಸ್ಥಾವರವಾಗಿದ್ದು, ಇದು 3,800 ಕ್ಕೂ ಹೆಚ್ಚು ನೇರ ಉದ್ಯೋಗ ನೀಡುವ ಕಾರ್ಖಾನೆ ಕರ್ನಾಟಕದ ಕೊಪ್ಪಳದಲ್ಲಿ ಸ್ಥಾಪನೆ.

ರೂಪೇಶ್ ಶೆಟ್ಟಿ ಜೊತೆ ಜಾಹ್ನವಿ ಆಕ್ಟಿಂಗ್. ಫೆಬ್ರವರಿ 7 ಕ್ಕೆ ಅಧಿಪತ್ರ ರಿಲೀಸ್.

ಫೆ.7ಕ್ಕೆ “ಗಜರಾಮ” ಅಖಾಡಕ್ಕೆ ಇಳಿಯಲು ರೆಡಿ.ರಾಜವರ್ಧನ್ ಕುಸ್ತಿಕಥೆಯಲ್ಲಿ ರಾಜವರ್ಧನ್.

This website uses cookies to improve your experience. We'll assume you're ok with this, but you can opt-out if you wish. Read More