ದೆಹಲಿಯಲ್ಲಿ ಮೋದಿಯನ್ನು ಭೇಟಿ ಮಾಡಿ ವಿಶೇಷ ಉಡುಗೊರೆ ನೀಡಿದ ಸಿಎಂ ಸಿದ್ಧರಾಮಯ್ಯನವರು

ಮಾನ್ಯ ಮುಖ್ಯಮಂತ್ರಿಯವರಾದ ಸಿದ್ಧರಾಮಯ್ಯನವರು ದೆಹಲಿ ಪ್ರವಾಸದಲ್ಲಿದ್ದು ಈ ವೆಳೆ (Siddaramaiah) ಅವರು ಇಂದು (ಗುರುವಾರ) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ಒಂದು ಸೌಹಾರ್ದಯುತ ಭೇಟಿ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಸಿದ್ಧರಾಮಯ್ಯನವರು
ಪ್ರಧಾನಿ ಮೋದಿ ಅವರಿಗೆ ಶಾಲು ಹೊದಿಸಿ ಮೈಸೂರು ಪೇಟಾ ವನ್ನು ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿದ ಮೈಸೂರು ದಸರಾ ಅಂಬಾರಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸಿದ್ಧರಾಮಯ್ಯನವರು ನೀಡಿದ ಉಡುಗೊರೆಯನ್ನು ಪ್ರಧಾನಿ ಮೋದಿ ಅವರು ಬಹಳ ಸಂತೋಷದಿಂದ ಸ್ವೀಕಾರ ಮಾಡಿದ್ದಾರೆ. ನಂತರ ಇಬ್ಬರೂ ನಾಯಕರೂ ಪರಸ್ಪರ ಕುಶಲೋಪರಿಯನ್ನು ವಿಚಾರಿಸಿದರು. ಬಳಿಕ ಸಿಎಂ ಹಾಗೂ ಪಿಎಂ ಕೆಲಹೊತ್ತು ಮಾತುಕತೆಯನ್ನು ನಡೆಸಿದ್ದಾರೆ. ನಂತರ ಸಿದ್ಧರಾಮಯ್ಯನವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನೂ ಭೇಟಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಣಕಾಸು ಸಚಿವೆ ಮತ್ತು ರಕ್ಷಣಾ ಸಚಿವರ ಕುಶಲೋಪರಿ ವಿಚಾರಿಸಿದರು. ಇಂದು ಮಾನ್ಯ ಸಿದ್ದರಾಮಯ್ಯಮನವರ ಜನ್ಮ ದಿನ ಕೂಡಾ ಆಗಿದ್ದು, ಅವರು ತಮ್ಮ ತಮ್ಮ 76ನೇ ಹುಟ್ಟುಹಬ್ಬವನ್ನು ದೆಹಲಿಯಲ್ಲೇ ಆಚರಿಸಿಕೊಂಡಿದ್ದಾರೆ. ಈ ವೇಳೆ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಕರ್ನಾಟಕದ ಮುಖ್ಯಮಂತ್ರಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.

Related posts

ಕಿರುತೆರೆಯಲ್ಲಿ ಶುರುವಾಗ್ತಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ “ಸುವರ್ಣ ಸೆಲೆಬ್ರಿಟಿ ಲೀಗ್” ಇದೇ ಭಾನುವಾರದಿಂದ ರಾತ್ರಿ 7 ಗಂಟೆಗೆ

ಯುವ ನಿರ್ಮಾಪಕಿಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್

ಎಲ್ಲರ ಮೆಚ್ಚುಗೆಗೆ ಪಾತ್ರವಾದ ಅಂಬಾನಿ ಕುಟುಂಬದ ಮದುವೆಯ ಧಾನ ಧರ್ಮ.

This website uses cookies to improve your experience. We'll assume you're ok with this, but you can opt-out if you wish. Read More