Rahul Gandhi : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಲೋಕಸಭೆ ಸದಸ್ಯತ್ವದ ಅನರ್ಹತೆಯನ್ನು ಸೋಮವಾರದಂದು ರದ್ದುಪಡಿಸಲಾಗಿದೆ. ಇದೇ ವೇಳೆ ರಾಹುಲ್ ಗಾಂಧಿಯವರು ತಮ್ಮ ಟ್ವಿಟರ್ ಖಾತೆಯ ಬಯೋ ಮಾಹಿತಿಯನ್ನ ಬದಲಾಯಿಸಿಕೊಂಡಿದ್ದು ಇದು ಈಗ ಎಲ್ಲರ ಗಮನವನ್ನು ಕಳೆಯುತ್ತಿದೆ. ರಾಹುಲ್ ಗಾಂಧಿಯವರಿಗೆ ಎರಡು ವರ್ಷ ಕಾಲ ಜೈಲು ಶಿಕ್ಷೆಯನ್ನು ಪ್ರಕಟಿಸಿದ ನಂತರ ಅವರನ್ನು ಲೋಕಸಭಾ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಆದರೆ ಈಗ ರಾಹುಲ್ ಗಾಂಧಿಯವರು ತಮ್ಮ ಟ್ವಿಟರ್ ನ ಬಯೋದಲ್ಲಿ ಸ್ವಲ್ಪ ಬದಲಾವಣೆ ಮಾಡಿದ್ದಾರೆ.
ರಾಹುಲ್ ಗಾಂಧಿಯವರು ತಮ್ಮ ಟ್ವಿಟರ್ ನ ಬಯೋದಲ್ಲಿ ಡಿಸ್ಕ್ವಾಲಿಫೈಡ್ ಎಂಪಿ (Disqualified MP) ಎಂದು ನಮೂದಿಸಿದ್ದರು. ಈಗ ಅದನ್ನು ಮೆಂಬರ್ ಆಫ್ ಪಾರ್ಲಿಮೆಂಟ್ (Member of Parliament) ಎಂದು ಬದಲಿಸಿಕೊಂಡಿದ್ದಾರೆ. ಸೋಮವಾರ ಲೋಕಸಭಾ ಸಚಿವಾಲಯ ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹತೆಯನ್ನು ಹಿಂಪಡೆದಿದ್ದು, ಅವರ ಸದಸ್ಯತ್ವವನ್ನು ಮರು ಸ್ಥಾಪಿಸಲಾಗಿದೆ ಎನ್ನುವ ವಿಚಾರವನ್ನು ತಿಳಿಸಿದೆ. ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿಸಸ್ಥ ಎಂದು ಗುಜರಾತ್ ನ ಸೂರತ್ ನ್ಯಾಯಾಲಯ ಆದೇಶಿಸಿತ್ತು.
ಮಾರ್ಚ್ 23 ರಂದು ಎರಡು ವರ್ಷ ಜೈಲು ಶಿಕ್ಷೆಯನ್ನು ವಿದಿಸಲಾಗಿತ್ತು, ಅದರ ಬೆನ್ನಲ್ಲೇ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಸೂರತ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿಯವರು ಸುಪ್ರೀಂ ಕೋರ್ಟ್ ಮೆಟ್ಟಿಲನ್ನು ಏರಿದ್ದರು. ಶುಕ್ರವಾರ ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೂರತ್ ನ್ಯಾಯಾಲಯದ ತೀರ್ಪಿಗೆ ತಡೆಯನ್ನು ನೀಡಿತ್ತು. ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು.