Home » ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಯ ; ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತೆ.

ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಯ ; ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತೆ.

by Suddi Mane
0 comment

ಸುಂದರ, ಪ್ರಶಾಂತ ಪ್ರಕೃತಿಯನ್ನು ನಾವೆಲ್ಲರೂ ಪ್ರೀತಿಸಿ, ಸ್ವಚ್ಛತೆಯನ್ನು ಕಾಪಾಡಿದರೆ ಪ್ರಕೃತಿ ಸದಾ ನಮ್ಮನ್ನು ಉತ್ತಮ ಆರೋಗ್ಯಭಾಗ್ಯದೊಂದಿಗೆ ರಕ್ಷಣೆ ಮಾಡುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

.


ಅವರು ಬುಧವಾರ ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟ ಮತ್ತು ಧರ್ಮಸ್ಥಳದ ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಸೇವಾಕರ್ತರ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿದರು.
ಶುದ್ಧವಾದ ಗಾಳಿ, ನೀರು ಮತ್ತು ಪ್ರಶಾಂತ ಪ್ರಾಕೃತಿಕಪರಿಸರದಿಂದ ನಾವು ಉತ್ತಮ ಆರೋಗ್ಯಭಾಗ್ಯವನ್ನು ಹೊಂದಬಹುದು. ಸೇವಾಮನೋಭಾವದಿಂದ ಸಂಪಾದಿಸಿದ ಪುಣ್ಯ ಶಾಶ್ವತವಾಗಿರುತ್ತದೆ. ದೇವರಿಗೆ ಪ್ರಿಯವಾದ ಸೇವೆ ಮಾಡುವುದರಿಂದ ಆತ್ಮತೃಪ್ತಿ ಮತ್ತು ಸಂತೋಷ ಸಿಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, “ಶೌರ್ಯ’’ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಸಾರ್ವಜನಿಕರು, ಭಕ್ತರು ಹಾಗೂ ಗ್ರಾಮಸ್ಥರು ಬುಧವಾರ

ಬೆಳಿಗ್ಯೆ ಗಂಟೆ 9 ರಿಂದ 12 ರ ವರೆಗೆ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

You may also like

Leave a Comment

ಸಮಗ್ರ ಸುದ್ದಿಗಳ ಆಗರ
ವಿಶೇಷ ಮಾಹಿತಿಗಳ ಸಂಚಾರ
ಸುದ್ದಿಮನೆ ಇದು ತಾಜಾ ಸಮಾಚಾರ

Edtior's Picks

Latest Articles

&copy 2023 by Suddi Mane. All rights reserved.

This website uses cookies to improve your experience. We'll assume you're ok with this, but you can opt-out if you wish. Accept Read More

Adblock Detected

Please support us by disabling your AdBlocker extension from your browsers for our website.
Designed & developed by Crisant Technologies