ಸರ್ಕಾರಿ ಶಾಲೆಗಳು ಎಂದಾಗ ಬಹಳಷ್ಟು ಜನರಲ್ಲಿ ಒಂದು ರೀತಿಯ ಕೇಳಿರಿಮೆ ಕಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಶಾಲೆಗಳ ದುಸ್ಥಿತಿ ಇಂತಹ ಆಲೋಚನೆ ಮಾಡಲು ಕಾರಣವಾಗಿದೆ. ಅದೆಷ್ಟೋ ಶಾಲೆಗಳಲ್ಲಿ ಮೂಲಸೌಕರ್ಯಗಳು ಸಮರ್ಪಕವಾಗಿ ಇಲ್ಲ. ಇದೇ ವಿಚಾರವಾಗಿ ರಾಜ್ಯದ ಹೈಕೋರ್ಟ್ ತನ್ನ ಕಳವಳವನ್ನು ವ್ಯಕ್ತಪಡಿಸುತ್ತಾ, ಸರಕಾರಿ ಶಾಲೆಗಳಲ್ಲಿನ ಮೂಲಸೌಕರ್ಯಗಳ ದುಸ್ಥಿತಿ ಆಘಾತವನ್ನು ತಂದಿದೆ. ಮನಸ್ಸನ್ನು ಘಾಸಿಗೊಳಿಸಿದೆ. ಕುಡಿಯುವ ನೀರು, ಶೌಚಾಲಯದಂತಹ ಕನಿಷ್ಠ ಸೌಕರ್ಯಗಳು ಸಮರ್ಪಕವಾಗಿ ಇಲ್ಲದಿರುವ ಸರ್ಕಾರಿ ಶಾಲೆಗಳಿಂದ ನಾವು ಎಂತಹ ಸಮಾಜವನ್ನು ಕಟ್ಟುತಿದ್ದೇವೆ ಎಂದು ಹೈ ಕೋರ್ಟ್ ತನ್ನ ಕಳವಳವನ್ನು ವ್ಯಕ್ತಪಡಿಸಿದೆ.

ಶಾಲೆಗಳಿಂದ ಹೊರಗುಳಿದಿರುವ ಮಕ್ಕಳ ವಿಚಾರವಾಗಿ 2013ರಲ್ಲಿ ಹೈ ಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಾಧೀಶರಾದ ಪ್ರಸನ್ನ ಬಿ ವರಾಲೆ ಹಾಗೂ ನ್ಯಾಯಾಧೀಶರಾದ ಎಂಜಿಎಸ್ ಕಮಾಲ್ ಅವರಿದ್ದ ನ್ಯಾಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದ ವೇಳೆ ಕೋರ್ಟ್ ಸರ್ಮಾರಿ ಶಾಲೆಗಳ ಮೂಲ ಸೌಕರ್ಯಗಳ ವಿಚಾರವಾಗಿ ಬೇಸರವನ್ನ ಹೊರ ಹಾಕಿದ. ವಿಚಾರಣೆಯ ವೇಳೆಯಲ್ಲಿ ಸರ್ಕಾರ ಸಲ್ಲಿಸಿದ್ದ ವರದಿಯಲ್ಲಿ ಸರ್ಕಾರಿ ಶಾಲೆಯೊಂದರಲ್ಲಿ ಕುಡಿಯುವ ನೀರನ್ನು ತಲೆ ಮೇಲೆ ಹೊತ್ತು ತರುತ್ತಿರುವುದು ಮತ್ತು ಇನ್ನೊಂದು ಶಾಲೆಯಲ್ಲಿ ಶೌಚಾಲಯದ ಸುತ್ತ ಮುಳ್ಳು ಗಂಟುಗಳು ಬೆಳೆದಿರುವ ಫೋಟೋಗಳನ್ನು ನ್ಯಾಯ ಪೀಠ ಗಮನಿಸಿದೆ.

ಅದನ್ನು ನೋಡಿ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ದುಸ್ಥಿತಿಗೆ ಇದೊಂದು ನಿರ್ದರ್ಶನವಾಗಿದೆ. ಈ ಫೋಟೋಗಳು ನಮ್ಮ ಮನಸ್ಸನ್ನು ಘಾಸಿಗೊಳಿಸಿದೆ. ಇವು ನಮ್ಮ ಆತ್ಮಸಾಕ್ಷಿಗೆ ಆಘಾತವನ್ನು ನೀಡುತ್ತಿದೆ ಎಂದು ನ್ಯಾಯ ಪೀಠ ಹೇಳಿದೆ. ಸರ್ಕಾರಿ ಶಾಲೆಗಳಲ್ಲಿನ ಮೂಲ ಸೌಕರ್ಯಗಳ ಕೊರತೆ ನಿವಾರಣೆ ಮಾಡುವ ಸರಕಾರದ ವರದಿಗಳು ಕೇವಲ ಕಣ್ಣೊರೆಸುವ ತಂತ್ರವಾಗಿದೆ ಅಷ್ಟೇ. ಕೆಲವು ಶಾಲೆಗಳಲ್ಲಿ ಶೌಚಾಲಯ ಹೆಸರಿಗೆ ಮಾತ್ರ ವಿಧ ಅಲ್ಲಿ ನೀರಿನ ಸೌಲಭ್ಯವಿಲ್ಲ.

ಇಂತಹ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಲು ಪೋಷಕರು ಹೇಗೇ ತಾನೇ ಒಪ್ಪುತ್ತಾರೆ. ಮಕ್ಕಳ ಭವಿಷ್ಯವನ್ನು ಸರ್ಕಾರಿ ಶಾಲೆಗಳಲ್ಲಿ ಕಾಣುವ ಪೋಷಕರ ಕನಸು ನನಸಾಗುವುದಕ್ಕೆ ಸಾಧ್ಯವಿದೆಯೇ ? ಎಂದು ಮುಖ್ಯ ನ್ಯಾಯಾಧೀಶರಾದ ಪ್ರಸನ್ನ ಬಿ ವರಾಲೆ ಅವರು ಪ್ರಶ್ನೆ ಮಾಡಿದ್ದಾರೆ. ವಾದ ಪ್ರತಿವಾದ ಆಲಿಸಿದ ನಂತರ ಹೈ ಕೋರ್ಟ್ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ಸ್ಥಿತಿ ಗತಿಗಳ ಬಗ್ಗೆ ಹೊಸದಾಗಿ ಸಮೀಕ್ಷೆಯನ್ನು ನಡೆಸಿ ಮೂರು ತಿಂಗಳುಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚನೆಯನ್ನು ನೀಡಿದೆ.
ಸಮೀಕ್ಷೆ ವೇಳೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿಗಳ ಸದಸ್ಯ ಕಾರ್ಯದರ್ಶಿಗಳನ್ನು ಭಾಗಿದಾರರನ್ನಾಗಿ ಮಾಡಿಕೊಳ್ಳಬೇಕೆನ್ನುವ ನಿರ್ದೇಶನವನ್ನು ಕೂಡಾ ನೀಡಿದೆ. ಅಲ್ಲದೇ ಶಾಲೆಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಅನುದಾನ ಹಂಚಿಕೆಯನ್ನು ಮಾಡಬೇಕೆಂದು ಸರ್ಕಾರಕ್ಕೆ ನಿರ್ದೇಶನ ನೀಡಿದ್ದು ವಿಚಾರಣೆಯನ್ನು ಮುಂದೂಡಿದೆ.

