ರಾಜ್ಯದ ಭಕ್ತಾದಿಗಳಿಗೆ ಗುಡ್ ನ್ಯೂಸ್. ಇನ್ಮುಂದೆ ಹಿರಿಯರಿಗೆ ದೇವರ ದರ್ಶನ ಬಲು ಸುಲಭ

ಸಾಮಾನ್ಯವಾಗಿ ದೇಗುಲಗಳಲ್ಲಿ ಹಿರಿಯ ನಾಗರಿಕರು ಸೇರಿದಂತೆ ಎಲ್ಲರೂ ಕ್ಯೂನಲ್ಲಿ ನಿಂತು ದೇವರ ದರ್ಶನ ಪಡೆಯುವುದು ಇತ್ತೀಚಿನ ದಿನಗಳಲ್ಲಿ ಸಹಜವಾಗಿದೆ. ಆದರೆ ಇನ್ನು ಮುಂದೆ ನಮ್ಮ ಕರ್ನಾಟಕ ರಾಜ್ಯದ ಧಾರ್ಮಿಕ ದೇವಾಲಯಗಳಲ್ಲಿ ಹಿರಿಯ ನಾಗರಿಕರು ಕ್ಯೂನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ ರಾಜ್ಯದ ಧಾರ್ಮಿಕ ದೇಗುಲಗಳಲ್ಲಿ ಹಿರಿಯ ನಾಗರಿಕರು ಕ್ಯೂನಲ್ಲಿ ನಿಂತು ದೇವರ ದರ್ಶನ ಪಡೆಯುವುದು ಕಷ್ಟವಾಗುತ್ತಿರುವುದರಿಂದ ಇನ್ನು ಮುಂದೆ ಹಿರಿಯ ನಾಗರಿಕರು ತಮ್ಮ ಆಧಾರ್ ಕಾರ್ಡ್ ಅಥವಾ ವಯಸ್ಸಿನ ದಾಖಲೆ ತೋರಿಸಿ

ದೇವರ ದರ್ಶನವನ್ನು ಸಲೀಸಾಗಿ ಬೇಗ ಪಡೆಯಬಹುದಾಗಿದೆ 65 ವರ್ಷ ಮೇಲ್ಪಟ್ಟ ನಾಗರಿಕರು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದಾಗಿದೆ, ಮಾತ್ರವಲ್ಲದೆ ಹಿರಿಯ ನಾಗರಿಕರಿಗಾಗಿ ವಿಶೇಷ ಸಿಬ್ಬಂದಿಗಳನ್ನು ಸಹ ನೇಮಕ ಮಾಡುವುದಾಗಿ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಹಿರಿಯ ನಾಗರಿಕರ ಸಹಾಯ ಕೇಂದ್ರ ಹಾಗೂ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನಿಯೋಜನೆ ಮಾಡಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ.ಹಿರಿಯ ನಾಗರಿಕರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದ್ದು ಹಿರಿಯ ನಾಗರಿಕರು ದೇವರ ದರ್ಶನವನ್ನು ವ್ಯವಸ್ಥಿತವಾಗಿ ಮತ್ತು ಸುಲಭವಾಗಿ

ಪಡೆಯಬಹುದಾಗಿದೆ ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದ್ದು ಹಿರಿಯ ನಾಗರಿಕರು ಸುಲಭವಾಗಿ ದೇವರ ದರ್ಶನ ಪಡೆಯಲು ಈ ಕ್ರಮ ಕೈಗೊಳ್ಳಲಾಗಿದ್ದು ಈಗಾಗಲೇ ಧಾರ್ಮಿಕ ದೇಗುಲಗಳಿಗೆ ಸುತ್ತೋಲೆ ಸಹ ಹೊರಡಿಸಲಾಗಿದೆ . ಒಟ್ಟಿನಲ್ಲಿ ರಾಜ್ಯ ಸರ್ಕಾರದ ಈ ನಿರ್ಧಾರದಿಂದ ದೇಗುಲಗಳಿಗೆ ಬರುವ ಹಿರಿಯ ನಾಗರಿಕರಿಗೆ ಹೆಚ್ಚಿನ ಖುಷಿಯಾಗಿದೆ ಎಂದೇ ಹೇಳಬಹುದು. ಆದರೆ ಹಬ್ಬ ಹಾಗೂ ವಿಶೇಷ ದಿನಗಳಂದು ಈ ವ್ಯವಸ್ಥೆ ಎಷ್ಟರಮಟ್ಟಿಗೆ ಜಾರಿಯಲ್ಲಿರುತ್ತದೆ ಇದು ಹಿರಿಯರಿಗೆ ಎಷ್ಟು ಅನುಕೂಲವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ

Related posts

ತಿರುಮಲದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಿದ ಭಕ್ತರ ಸಂಖ್ಯೆ: ಭಾನುವಾರ ಹುಂಡಿಗೆ ಬಂದ ಹಣವೆಷ್ಟು ಗೊತ್ತಾ?

ನೂತನ ಸಂಸತ್ ನಲ್ಲಿ ರಾಜದಂಡದ ಸ್ಥಾಪನೆ: ಸೆಂಗೋಲ್ ನ ಐತಿಹಾಸಿಕ ಪ್ರಾಮುಖ್ಯತೆ ಏನು?

ಸಾಗರದ ಮಧ್ಯೆ ಇರುವ 5 ಐತಿಹಾಸಿಕ ಕೋಟೆಗಳಿವು: ಒಮ್ಮೆಯಾದರೂ ನೋಡಲೇಕು ಈ ಇತಿಹಾಸದ ಕುರುಹುಗಳನ್ನು

This website uses cookies to improve your experience. We'll assume you're ok with this, but you can opt-out if you wish. Read More