ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಇನ್ಸ್ಟಾಗ್ರಾಂ ನಲ್ಲಿ ಕೋಟಿ ಗಳ ಸಂಖ್ಯೆಯಲ್ಲಿ ಹಿಂಬಾಲಕರು ಇರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಆದರೆ ಇತ್ತೀಚಿಗೆ ಒಂದು ಸುದ್ದಿ ಎಲ್ಲರಿಗೂ ಶಾಕ್ ನೀಡಿತ್ತು. ಅದೇನೆಂದರೆ ವಿರಾಟ್ ಕೊಹ್ಲಿ ಅವರು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಒಂದು ಪ್ರಮೋಷನ್ ಪೋಸ್ಟ್ ಗೆ ಬರೋಬ್ಬರಿ 11.45 ಕೋಟಿ ರೂ ಗಳ ಸಂಭಾವನೆಯನ್ನು ಪಡೆಯುತ್ತಾರೆ ಎನ್ನುವುದಾಗಿತ್ತು. ಈ ಸುದ್ದಿ ಎಲ್ಲೆಡೆ ವೈರಲ್ ಆಗುವ ಮೂಲಕ ಗಮನ ಸೆಳೆದಿತ್ತು.
ಈ ವಿಷಯ ಎಲ್ಲೆಡೆ ವೈರಲ್ ಆದ ಮೇಲೆ ಇದೀಗ ವಿರಾಟ್ ಕೊಹ್ಲಿ ಅವರು ಈ ಸುದ್ದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್ ಸಲೋಷನ್ಸ್ ಫ್ಲಾಟ್‌ಪಾರ್ಮ್ ಹಾಪರ್ ಎಚ್ ಕ್ಯೂ ಶುಕ್ರವಾರ ವಿರಾಟ್ ಕೊಹ್ಲಿ ಅವರ ಸೋಶಿಯಲ್ ಮೀಡಿಯಾ ಆದಾಯದ ಬಗ್ಗೆ ವರದಿಯೊಂದನ್ನು ಪ್ರಕಟಿಸಿತ್ತು. ಅದರಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಹಾಗೂ ಲಿಯೊನೆಲ್ ಮೆಸ್ಸಿ ನಂತರ ವಿರಾಟ್ ಕೊಹ್ಲಿ ವಿಶ್ವದಲ್ಲಿಯೇ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಮೂರನೇ ಕ್ರೀಡಾಪಟು ಎಂದು ಹೇಳಿತ್ತು.
ಈ ವಿಷಯ ಹೊರ ಬಂದ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ವಿರಾಟ್ ಕೊಹ್ಲಿ ಬಹುಕೋಟಿ ಹಣವನ್ನು ಇನ್ಸ್ಟಾಗ್ರಾಂ ಮೂಲಕ ಗಳಿಸುತ್ತಿದ್ದಾರೆ ಎನ್ನುವ ಸುದ್ದಿಗಳು ಎಲ್ಲರಿಗೂ ಅಚ್ಚರಿಯನ್ನು ಮೂಡಿಸಿತ್ತು. ಇದೀಗ ಸ್ವತಃ ವಿರಾಟ್ ಕೊಹ್ಲಿ ಅವರೇ ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. ತಾನು ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ 11.45 ಕೋಟಿ ರೂ ಪಡೆಯುವ ಸುದ್ದಿ ಸುಳ್ಳು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ಟ್ವಿಟರ್ ನಲ್ಲಿ ಪೋಸ್ಟ್ ಒಂದನ್ನು ಮಾಡಿರುವ ವಿರಾಟ್ ಕೊಹ್ಲಿ ಅವರು “ನಾನು ನನ್ನ ಜೀವನದಲ್ಲಿ ಸ್ವೀಕರಿಸಿದ ಎಲ್ಲದಕ್ಕೂ ಕೃತಜ್ಞ ಮತ್ತು ಋಣಿಯಾಗಿದ್ದೇನೆ, ಆದರೆ ಇದೇ ವೇಳೆ ನನ್ನ ಸೋಶಿಯಲ್ ಮೀಡಿಯಾ ಗಳೆಕೆಯ ಬಗ್ಗೆ ಹರಿದಾಡುತ್ತಿರುವ ಸುದ್ದಿ ನಿಜವಲ್ಲ,” ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ತಿಳಿಸಿದ್ದಾರೆ.