ಸದ್ಯಕ್ಕಂತೂ ಸಿನಿಮಾ ರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡೋದು ಒಂದು ಟ್ರೆಂಡ್ ಆಗಿದೆ. ಈಗಾಗಲೇ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ರಾಕಿಂಗ್ ಸ್ಟಾರ್ ಯಶ್ ದೊಡ್ಡ ಸ್ಟಾರ್ ಆಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಈಗ ಇದೇ ಹಾದಿಯಲ್ಲಿ ಸ್ಯಾಂಡಲ್ವುಡ್ ನಟ ಗೋಲ್ಡನ್ ಸ್ಟಾರ್ ಖ್ಯಾತಿಯ ಸ್ಟಾರ್ ಗಣೇಶ್ ಅವರು ತಮ್ಮ ಹುಟ್ಟುಹಬ್ಬದ ದಿನದಂದು ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ. ಗಣೇಶ್ ಅವರು ನಟನಾಗಿ, ನಿರ್ಮಾಪಕನಾಗಿ ಕನ್ನಡ ಸಿನಿಮಾ ರಂಗದಲ್ಲಿ ಹೆಸರನ್ನು ಮಾಡಿದ್ದಾರೆ.
ಈಗ ನಟ ಗಣೇಶ್ ಅವರು ವಿಖ್ಯಾತ ಚಿತ್ರ ಪ್ರೊಡಕ್ಷನ್ ಮೂಲಕ ಪ್ಯಾನ್ ಇಂಡಿಯಾ ಸಿನಿಮಾದ ನಿರ್ಮಾಣಕ್ಕೆ ಮುಂದಾಗಿದ್ದು, ಈ ಮೂಲಕ ಗಣೇಶ್ ಪ್ಯಾನ್ ಇಂಡಿಯಾದತ್ತ ತಮ್ಮ ಹೆಜ್ಜೆಯಿಡಲು ಸಜ್ಜಾಗಿದ್ದಾರೆ. ಇಂದು ಗೋಲ್ಡನ್ ಸ್ಟಾರ್ ಗಣೇಶ್ ಅವರ ಪಾಲಿಗೆ ಬಹಳ ವಿಶೇಷವಾದ ದಿನ, ಇಂದು ಅಂದರೆ ಜುಲೈ 2 ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅವರ ಹುಟ್ಟುಹಬ್ಬದ ಸಂಭ್ರಮದ ದಿನ. ಗಣೇಶ್ ಅವರು ಇಂದು ತಮ್ಮ 43 ನೇ ವಸಂತಕ್ಕೆ ಕಾಲಿರಿಸಿದ್ದಾರೆ.
ತಮ್ಮ ಜನ್ಮದಿನದ ವಿಶೇಷ ಎನ್ನುವಂತೆ ಗಣೇಶ್ ಅವರ ಅಭಿಮಾನಿಗಳಿಗೆ ಬರ್ತ್ ಡೇ ಗಿಫ್ಟ್ ಆಗಿ ವಿಖ್ಯಾತ್ ಚಿತ್ರ ಪ್ರೊಡಕ್ಷನ್ ಕಡೆಯಿಂದ ಒಂದು ದೊಡ್ಡ ಘೋಷಣೆಯನ್ನು ಮಾಡಿದ್ದಾರೆ. ಇಷ್ಟು ದಿನಗಳ ಕಾಲ ವಿನೂತನ ಹಾಗೂ ವಿಶಿಷ್ಟ ಕಥೆಗಳ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾ ಪ್ರೇಕ್ಷಕರ ಮನಗೆದ್ದಿದ್ದ ಯುವ ನಿರ್ಮಾಪಕ ವಿಖ್ಯಾತ್, ಗಣೇಶ್ ಅವರಿಗಾಗಿ ಒಂದು ಹೊಸ ಸಿನಿಮಾ ಮಾಡಲು ಮುಂದಾಗಿದ್ದಾರೆ. ಯಾವಾಗಲೂ ವಿಭಿನ್ನವಾದ ಕಥೆಯಲ್ಲಿ ಕಾಣಿಸಿಕೊಳ್ಳುವ ಗಣೇಶ್ ಅವರು ಈಗ ಈ ಹೊಸ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಈ ಸಿನಿಮಾ ನಟ ಗಣೇಶ್ ಅವರ ವೃತ್ತಿ ಬದುಕಿನಲ್ಲಿ ಒಂದು ಪ್ರಮುಖ ಸಿನಿಮಾ ಆಗಲಿರುವ 42ನೇ ಚಿತ್ರವಾಗಲಿದೆ ಎನ್ನಲಾಗಿದೆ. ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ಅಡಿಯಲ್ಲಿ ಗೋಲ್ಡನ್ ಸ್ಟಾರ್ ನಟಿಸುತ್ತಿರುವ 6ನೇ ಸಿನಿಮಾ ಇದಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರು ಈ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿಮಾಕ್ಕಾಗಿ ಸಿದ್ಧತೆಗಳನ್ನು ನಡೆಸಿದ್ದಾರೆ. ಸಿನಿಮಾ ತಯಾರಿ ಚಟುವಟಿಕೆಗಳು ಆರಂಭವಾಗಿದೆ ಎನ್ನಲಾಗಿದೆ. ಇನ್ನು ಶೀಘ್ರದಲ್ಲೇ ನಿರ್ದೇಶಕರು, ಕಲಾವಿದರು, ತಾಂತ್ರಿಕ ವರ್ಗ, ನಾಯಕಿ ಇನ್ನಿತರೆ ಮಾಹಿತಿಗಳು ಹೊರಬರಲಿದೆ ಎನ್ನಲಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಸುದ್ದಿಮನೆ ಕಡೆಯಿಂದ ಜನ್ಮದಿನದ ಶುಭಾಶಯಗಳು.