ಉಡುಪಿಯ ಕುತ್ಪಾಡಿಯಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ನೆರೆವೇರಿತು ಅವರು ಮಾತನಾಡಿದರು. ಧರ್ಮಸ್ಥಳ ಧರ್ಮಾಧಿಕಾರಿಗಳಾದ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಶತೆಯಲ್ಲಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದರು ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಉದ್ಘಾಟನೆ ನೆರೆವೇರಿಸಿದರು.