I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್. ಯುವ ನಾಯಕ ರವಿ ಗೌಡ ಹೊಸ ಸಿನಿಮಾಗೆ ಸಿಎಂ ಸಾಥ್…I’m god ಟೈಟಲ್ ಹಾಗೂ ಪೋಸ್ಟರ್ ರಿಲೀಸ್ ಮಾಡಿ ಶುಭ ಕೋರಿಕೆ*ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ ಆತ್ಮೀಯ ಗೆಳೆಯ ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ.

ಧ್ವಜ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದ ರವಿ ಗೌಡ I’m god ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಅವರು ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ರವಿ ಗೌಡ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಿಸಿರುವ I’m god ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಅನಾವರಣ ಮಾಡಿದರು. ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸಿ ಬಸವೇಗೌಡ್ರು ಮಗ ರವಿ ಗೌಡ ಮಗ ಹುಟ್ಟುವ ಮುಂಚೆಯೇ ಬಸವೇಗೌಡ ನನಗೆ ಪರಿಚಯ. ನಾನು ಬಸವೇಗೌಡರ ಮಗ ಸಿನಿಮಾದಲ್ಲಿ ನಟಿಸುತ್ತಾನೆ. ನಿರ್ಮಾಪಕ ಆಗುತ್ತಾನೆ. ನಿರ್ದೇಶಕನಾಗುತ್ತಾನೆ ಎಂದು ಕೊಂಡಿರಲಿಲ್ಲ. ಸಿನಿಮಾ ಕ್ಷೇತ್ರಗಳಲ್ಲಿ ಒಳ್ಳೆ ನಟನಾಗಿ, ನಿರ್ದೇಶಕನಾಗಿ ಮೂಡಿ ಬರಲಿ. ದುಡ್ಡಿದ್ರೆ ಯಾರು ಬೇಕಾದರೂ ನಿರ್ಮಾಪಕರು ಆಗಬಹುದು. ಆದರೆ ನಟನೆ, ನಿರ್ದೇಶಕರಾಗುವುದು ರಕ್ತದಲ್ಲಿ ಬಂದಾಗ ಮಾತ್ರ ಸಾಧ್ಯವಾಗುವುದು. ಬಸವೇಗೌಡ ಮಗ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿರುವುದು ಸಂತಸ‌. ಈ ಕ್ಷೇತ್ರದಲ್ಲಿ ಪ್ರಬುದ್ಧವಾಗಿ ಬೆಳೆಯಬೇಕು ಎಂದು ಆಶಿಸುತ್ತೇನೆ.

ನಾನು ಸಿನಿಮಾ ನೋಡುತ್ತೇನೆ. ಸಿನಿಮಾ ಕ್ಷೇತ್ರದಲ್ಲಿ ದೊಡ್ಡದಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.I’m god ರೋಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರು ಹಾಗೂ ಕೇರಳದಲ್ಲಿ ಶೂಟಿಂಗ್ ನಡೆಸಲಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ಸಿಬಿಜಿ ಪ್ರೊಡಕ್ಷನ್ಸ್ ನಡಿ ಮೂಡಿ ಬರ್ತಿರುವ I’m god ಚಿತ್ರಕ್ಕೆ ಕಾಂತಾರ ಮ್ಯೂಸಿಕ್ ಮಾಂತ್ರಿಕ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ರವಿ ವರ್ಮಾ ಸಾಹಸ ನಿರ್ದೇಶನ ಹಾಗೂ ಜಿತಿನ್ ದಾಸ್ ಕ್ಯಾಮೆರಾ ಕೆಲಸ , ಸುರೇಶ್ ಅರುಮುಗಂ ಸಂಕಲನ ಚಿತ್ರಕ್ಕಿರಲಿದೆ.

Related posts

ರೂಪೇಶ್ ಶೆಟ್ಟಿ ಜೊತೆ ಜಾಹ್ನವಿ ಆಕ್ಟಿಂಗ್. ಫೆಬ್ರವರಿ 7 ಕ್ಕೆ ಅಧಿಪತ್ರ ರಿಲೀಸ್.

ಫೆ.7ಕ್ಕೆ “ಗಜರಾಮ” ಅಖಾಡಕ್ಕೆ ಇಳಿಯಲು ರೆಡಿ.ರಾಜವರ್ಧನ್ ಕುಸ್ತಿಕಥೆಯಲ್ಲಿ ರಾಜವರ್ಧನ್.

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

This website uses cookies to improve your experience. We'll assume you're ok with this, but you can opt-out if you wish. Read More