ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದಾಗಿ ಕರಾವಳಿ ಭಾಗಗಳಲ್ಲಿನ ನದಿಗಳು ತುಂಬಿ ಹರಿಯುತ್ತಿದೆ. ನದಿಗಳು ತುಂಬಿ ಹರಿಯುತ್ತಿರುವ ಕಾರಣದಿಂದಾಗಿ ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲವು ಭಕ್ತರಿಗೆ ಒಂದು ಪ್ರಮುಖವಾದ ಸೂಚನೆಯನ್ನು ಹೊರಡಿಸಿದೆ.
ಜುಲೈ 21 ರಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಯ ನೀರಿನ ಹರಿವು ಹೆಚ್ಚಾಗಿದೆ.
ನದಿಯ ನೀರಿನ ಹರಿವು ಹೆಚ್ಚಳದಿಂದಾಗಿ ಕುಮಾರಧಾರ ನದಿಯ ಸ್ನಾನ ಘಟ್ಟವು ಮುಳುಗಿದೆ. ಭಾರೀ ಮಳೆಗೆ ಸ್ನಾನ ಘಟ್ಟದಲ್ಲಿ ನೀರು ತುಂಬಿದೆ. ಸುಬ್ರಹ್ಮಣ್ಯ ಪರಿಸರದಲ್ಲಿ ಎಡೆಬಿಡದೇ ಒಂದೇ ಸಮನೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಕಾರಣ ದೇಗುಲದ ಆಡಳಿತ ಮಂಡಳಿ ಮಹತ್ವದ ನಿರ್ಧಾರವನ್ನು ಮಾಡಿದೆ.
ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸ್ನಾನ ಘಟ್ಟದಲ್ಲಿ ನೀರಿಗೆ ಇಳಿಯದಂತೆ ಭಕ್ತರಿಗೆ ಆಡಳಿತ ಮಂಡಳಿಯು ಸೂಚನೆಯನ್ನು ಹೊರಡಿಸಿದೆ. ರಾಜ್ಯದ ಒಟ್ಟು ಹದಿನೇಳು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಕೆಲವು ಕಡೆ ರೆಡ್ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 23 ರಂದು ಆರೆಂಜ್ ಅಲರ್ಟ್ ಮತ್ತು 24ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.